ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಕೌನ್ಸೆಲಿಂಗ್ ಆರಂಭ

Update: 2016-03-23 18:15 GMT

ಬೆಂಗಳೂರು, ಮಾ. 23: ಪರೀಕ್ಷೆ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಆತ್ಮಸ್ಥೈರ್ಯ ತುಂಬುವ ಸದುದ್ದೇಶದಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ‘ಸಹಾಯವಾಣಿ’ ಕೌನ್ಸೆಲಿಂಗ್ ಕಾರ್ಯಕ್ರಮ ಇಂದಿನಿಂದ ಆರಂಭವಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಾಯವಾಣಿ ಸಂಖ್ಯೆ 080-23310075 ಮತ್ತು 080-23310076ನ್ನು ಸಂಪರ್ಕಿಸಬಹುದು. ಈ ಸಹಾಯವಾಣಿ ಮಾ.28ರ ವರೆಗೆ ಕಾರ್ಯನಿರ್ವಹಿಸಲಿವೆ. ಪೋಷಕರು, ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ರವಿವಾರ ಹಾಗೂ ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪ್ರಕಟನೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News