ಎಸಿಬಿ ವಾಪಸ್ ಪಡೆಯದಿದ್ದರೆ ಕೋರ್ಟ್‌ಗೆ ರಿಟ್ ಅರ್ಜಿ: ವಕೀಲರ ಸಂಘ

Update: 2016-03-23 18:21 GMT

ಬೆಂಗಳೂರು, ಮಾ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ಅಧಿಕಾರವನ್ನು ಕಸಿದುಕೊಂಡು, ಭ್ರಷ್ಟಾಚಾರ ನಿಗ್ರಹ ದಳ ಮಾಡುತ್ತಿರುವುದನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಹೆಚ್.ಸಿ. ಶಿವರಾಮ್ ಆಗ್ರಹಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರವನ್ನು ನಿಯಂತ್ರಣ ಮಾಡಲಿಕ್ಕಾಗಿಯೇ 1984 ರಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಅತಿ ಪರಿಣಾಮಕಾರಿಯಾಗಿ ಕೆಲಸ ಮಾಡದ ಪರಿಣಾಮ ಲೋಕಾಯುಕ್ತವನ್ನು ಜಾರಿ ತರಲಾಯಿತು. ಆದರೆ ಈಗ ಸರಕಾರ ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಮತ್ತೆ ಎಸಿಬಿ ಜಾರಿ ಮಾಡಲು ಹೊರಟಿದೆ ಎಂದು ಹೇಳಿದರು. ಸರಕಾರ ಮಾ.31 ರೊಳಗೆ ತನ್ನ ನಿರ್ಧಾರವನ್ನು ಬದಲಿಸಿಕೊಳ್ಳಬೇಕು. ಇಲ್ಲವಾದರೆ ಮುಂದಿನ ಕಲಾಪಗಳಲ್ಲಿ ಕೆಂಪು ಪಟ್ಟಿಯನ್ನು ಧರಿಸುವ ಮೂಲಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಚ್ಚರಿಕೆ ನೀಡಿದರು. ಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News