ಬಾಂಗ್ಲಾದೇಶ: ಚುನಾವಣಾ ಹಿಂಸೆಗೆ 11 ಬಲಿ
Update: 2016-03-23 23:52 IST
ಢಾಕಾ, ಮಾ. 23: ಬಾಂಗ್ಲಾದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದರು.
ಈ ಪೈಕಿ ಏಳು ಮಂದಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.ಅದೇ ವೇಳೆ, ಚುನಾವಣೆಯಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ನಡೆದಿದೆ ಎಂಬುದಾಗಿ ಪ್ರತಿಪಕ್ಷಗಳು ಆರೋಪಿಸಿವೆ.
ದಕ್ಷಿಣ ಕರಾವಳಿ ಪಟ್ಟಣ ಮತಬ್ರಿಯದಲ್ಲಿ ಹೆಚ್ಚಿನ ಪ್ರಮಾಣದ ಹಿಂಸಾಚಾರ ನಡೆದಿದೆ. ಅಲ್ಲಿ ಸಾವಿರಾರು ಆಡಳಿತಾರೂಢ ಪಕ್ಷದ ಕಾರ್ಯಕರ್ತರು ಮತಪೆಟ್ಟಿಗೆಗಳನ್ನು ಸರಕಾರಿ ಪ್ರಧಾನ ಕಚೇರಿಗಳಿಗೆ ಕೊಂಡೊಯ್ಯುತ್ತಿದ್ದ ಪೊಲೀಸರು ಮತ್ತು ಗಡಿ ಸೈನಿಕರ ಮೇಲೆ ಆಕ್ರಮಣ ನಡೆಸಿದರು.