ಪುತ್ತೂರು: ಮಾ.20-30:ಕಿಲ್ಲೆ ಮೈದಾನದಲ್ಲಿ ದ್ವಿದಿನ ಧಾರ್ಮಿಕ ಮತ ಪ್ರವಚನ
ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಮತ್ತು ಸುನ್ನೀ ಸ್ಟೂಡೆಂಟ್ ಫೆಡರೇಶನ್ ವತಿಯಿಂದ ಉತ್ತರ ಕೇರಳದ ಮತ ಲೌಕಿಕ ವಿದ್ಯಾಭ್ಯಾಸ ಸಮುಚ್ಚಯವಾದ ‘ಖಾದಿಸಿಯ್ಯ’ ಇದರ ಪ್ರಚಾರಾರ್ಥ ದ್ವಿದಿನ ಧಾಮಿ9ಕ ಪ್ರವಚನ ಮಾ.29 ಮತ್ತು 30ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸ್ವಾಗತ ಸಮಿತಿ ಕೋಶಾಧಿಕಾರಿ ಶಾಕಿರ್ ತಿಳಿಸಿದ್ದಾರೆ.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2 ದಿನಗಳ ಕಾಲ ನಡೆಯುವ ಧಾರ್ಮಿಕ ಪ್ರಭಾಷಣದ ನೇತೃತ್ವವನ್ನು ದ.ಕ.ಜಿಲ್ಲಾ ಸಂಯುಕ್ತ ಖಾಝಿ ಅಸ್ಸಯ್ಯದ್ ಕೂರತ್ ತಂಙಳ್ ವಹಿಸಲಿದ್ದಾರೆ. ಎಸ್‌ಎಸ್‌ಎಫ್ ಕೇರಳ ರಾಜ್ಯ ಉಪಾಧ್ಯಕ್ಷ ಡಾ. ಫಾರೂಕ್ ನಈಮಿ ಕೊಲ್ಲಂ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಮಾ.29ರಂದು ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಯಾಕೂಬ್ ಸಅದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಣಿ ದಾರುಲ್ ಇರ್ಶಾದ್‌ನ ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್‌ವೈಎಸ್ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ರಫೀಕ್ ಸಅದಿ ದೇಲಂಪಾಡಿ ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಹಂಝ ಮದನಿ ಮಿತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.
ಮಾ.30ರಂದು ನಡೆಯಲಿರುವ ಸಮಾರೋಪ ಸಮಾರಂಭವನ್ನು ಎಸ್‌ವೈಎಸ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಎಂಎಸ್‌ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ. ಕುಂಬ್ರ ಮರ್ಕಝುಲ್ ಹುದಾ ಅಧ್ಯಕ್ಷ ಇಸ್ಮಾಯಿಲ್ ತಂಙಳ್ ಉಜಿರೆ ಅಧ್ಯಕ್ಷತೆ ವಹಿಸಲಿದ್ದಾರೆ. ಖಾದಿಸಿಯ್ಯ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಮಹಮ್ಮದ್ ಕುಂಞಿ ಸಖಾಪಿ ಕೊಲ್ಲಂ ಹಾಗೂ ನೆಲ್ಲಿಕುನ್ನು ಮುದರ್ರಿಸ್ ಸ್ವಲಾಹುದ್ದೀನ್ ಸಖಾಫಿ ಪ್ರಾಸ್ತಾವಿಕ ಪ್ರಭಾಷಣ ಮಾಡಲಿದ್ದಾರೆ. ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ನಾಯಕರು ಉಮರಾ ಉಲಮಾಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್ಸೆಸ್ಸೆಫ್ ಪುತ್ತೂರು ವಲಯ ಅಧ್ಯಕ್ಷ ಕೊಂಬಾಳಿ ಕೆ.ಎಂ.ಎಚ್. ಝುಹ್‌ರಿ, ಸ್ವಾಗತ ಸಮಿತಿ ಅಧ್ಯಕ್ಷ ಹಂಝ ಮದನಿ ಮಿತ್ತೂರು, ಸ್ವಾಗತ ಸಮಿತಿ ಸಂಚಾಲಕ ಸಿದ್ದೀಕ್ ಕಬಕ, ಎಸ್‌ವೈಎಸ್ ಪುತ್ತೂರು ಕೇಂದ್ರದ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬಪ್ಪಳಿಗೆ ಉಪಸ್ಥಿತರಿದ್ದರು.