×
Ad

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಲಿರುವ ಮೆಹಬೂಬಾ ಮುಫ್ತಿ

Update: 2016-03-24 18:23 IST

ಶ್ರೀನಗರ, ಮಾ24 .: ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಸರಕಾರ ರಚನೆಗೆ ಪಿಡಿಪಿ ಮುಂದಾಗಿದ್ದು, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಗುರುವಾರ ಶ್ರೀನಗರದಲ್ಲಿ  ನಡೆದ ಪಿಡಿಪಿ ಶಾಸಕಾಂಗ ಸಭೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರಕಾರ ರಚನೆಗೆ ಯಾವುದೇ ಷರತ್ತುಗಳಿಲ್ಲದೆ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಮಾಣ ವಚನ ದಿನಾಂಕ ರಾಜ್ಯಪಾಲರು, ಬಿಜೆಪಿ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾರ್ಚ್‌ 22ರಂದು ಮೆಹಬೂಬಾ ಮುಫ್ತಿ ಅವರು ಪ್ರಧಾನಿ  ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಸರಕಾರ ರಚನೆಗೆ ಒಪ್ಪಿಕೊಂಡಿದ್ದರು.ಜಮ್ಮು -ಕಾಶ್ಮೀರದಲ್ಲಿ ಜನವರಿ 7ರಂದು ಮುಖ್ಯ ಮಂತ್ರಿ ಮುಫ್ತಿ ಮುಹಮ್ಮದ್‌ ಸಯೀದ್ ನಿಧನರಾದ ಬಳಿಕ ರಾಜಕೀಯ ಬಿಕ್ಕಟ್ಟು ಕಾಣಿಸಿಕೊಂಡು ಇದೀಗ   ರಾಜ್ಯಪಾಲರ ಆಡಳಿತ ಜಾರಿಯಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News