×
Ad

ಉಡುಪಿ ತಾಲೂಕು ಮಟ್ಟದ ಎಸ್‌ಡಿಎಂಸಿ ಸಮಾವೇಶ

Update: 2016-03-24 23:51 IST

ಉಡುಪಿ, ಮಾ.24: ಉಡುಪಿ ಜಿಲ್ಲಾ ಹಾಗೂ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ, ಮಂಗಳೂರಿನ ಪಡಿ ಸಂಸ್ಥೆ, ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆ, ಲಯನ್ಸ್ ಕ್ಲಬ್, ಪರ್ಯಾಯ ಪೇಜಾವರ ಮಠದ ಸಂಯುಕ್ತ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಎಸ್‌ಡಿಎಂಸಿ ಸಮಾವೇಶವನ್ನು ಗುರುವಾರ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಹಾಗೂ ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ ಮಾತನಾಡಿ, ಸರಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳಂತೆ ಉನ್ನತೀಕರಣಗೊಳಿಸುವುದು ಇಂದಿನ ಅನಿವಾರ್ಯ. ಇದರಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದರು. ಉಡುಪಿ ತಾಲೂಕು ಎಸ್‌ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷೆ ಇಂದಿರಾ ಪಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

 ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ್ ಶೆಟ್ಟಿ ಇಂದ್ರಾಳಿ, ಉದ್ಯಮಿ ಅಮೃತ್ ಶೆಣೈ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿಲೀಪ್ ಹೆಗ್ಡೆ, ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ ಎಂ.ಅಬ್ದುಸ್ಸಲಾಂ ಚಿತ್ತೂರು, ಲಯನೆಸ್ ಜಿಲ್ಲಾ ಸಂಯೋಜಕಿ ನಿರುಪಮಾ ಪಿ.ಶೆಟ್ಟಿ, ನಗರಸಭಾ ಸದಸ್ಯ ಜನಾರ್ದನ ಭಂಡಾರ್ಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News