×
Ad

ಮೂಡುಬಿದಿರೆ : ಶಿಕ್ಷಕರ ವೇತನದ ಸಮಸ್ಯೆಗೆ ಪರಿಹಾರ

Update: 2016-03-25 17:54 IST

  ಮೂಡುಬಿದಿರೆ: ದ.ಕ. ಜಿಲ್ಲೆಯ ವಿವಿಧ ತಾಲೂಕಿನ ಶಿಕ್ಷಕರುಗಳಿಗೆ ಕಳೆದ ನಾಲ್ಕು ತಿಂಗಳಿಂದ ವೇತನದ ಸಮಸ್ಯೆ ಎದುರಾಗಿದ್ದು; ಇದನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸ್ಟ್ಯಾನಿ ತಾವ್ರೋ ಮತ್ತು ಮಂಗಳೂರು ವಲಯದ ಅಧ್ಯಕ್ಷ ಪ್ರವೀಣ್ ಕುಟಿನ್ಹಾ ಅವರು ರಾಜ್ಯ ಆರ್ಥಿಕ ಇಲಾಖೆಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಇವರನ್ನು ಭೇಟಿ ಮಾಡಿ ಶಿಕ್ಷಕರ ವೇತನದ ಸಮಸ್ಯೆಯನ್ನು ಪರಿಹರಿಸುವಲ್ಲಿ ಮಾತುಕತೆ ನಡೆಸಿದ್ದು; ಆರ್ಥಿಕ ಇಲಾಖೆಯು ವಿವಿಧ ಅನುದಾನಗಳಿಂದ ಶಿಕ್ಷಕರ ವೇತನವನ್ನು ಬಿಡುಗಡೆಗೊಳಿಸಲು ಕಾರ್ಯದರ್ಶಿಯವರು ಸ್ಪಂದಿಸಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸ್ಟ್ಯಾನಿ ತಾವ್ರೋ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಾಲ್ಟರ್ ಡಿ,ಮೆಲ್ಲೋ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ (ರಿ) ಬೆಂಗಳೂರು ಇದರ ಮಾಜಿ ಸಂಘಟನಾ ಕಾರ್ಯದರ್ಶಿ ಕೆ.ಕೆ.ಮಂಜುನಾಥ ಕುಮಾರ್ ಮಾರ್ಗದರ್ಶನ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News