ಉಪ್ಪಿನಂಗಡಿ : ಬೈಕ್ ಅಪಘಾತ ಗಾಯಾಳು ಸಾವು
Update: 2016-03-25 20:25 IST
ಉಪ್ಪಿನಂಗಡಿ: ಬೈಕೊಂದು ಡಿಕ್ಕಿ ಹೊಡೆದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಲ್ಲಿನ ಪೆರಿಯಡ್ಕದ ಜನತಾ ಕಾಲನಿ ನಿವಾಸಿ ದೇವಮ್ಮ (70) ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಳೆದ ಫೆ.28ರಂದು ದೇವಮ್ಮ (70) ಅವರು ಪೆರಿಯಡ್ಕ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಜನಾರ್ದನ ಎಂಬವರು ಉಪ್ಪಿನಂಗಡಿ ಕಡೆಯಿಂದ ಚಲಾಯಿಸಿಕೊಂಡು ಬಂದ ಬೈಕ್ ಇವರಿಗೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ಇವರ ತಲೆಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.