ಕರ್ನಾಟಕ ರಕ್ಷಣಾ ವೇದಿಕೆ: ಜಿಲ್ಲಾಧ್ಯಕ್ಷರಾಗಿ ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಆಯ್ಕೆ
ಪುತ್ತೂರು, ಮಾ.26: ಕರ್ನಾಟಕ ರಕ್ಷಣಾ ಸಮಿತಿ (ಸ್ವಾಭಿಮಾನ ಬಣ) ಇದರ ದ.ಕ. ಜಿಲ್ಲಾ ಅಧ್ಯಕ್ಷರಾಗಿ ಉದ್ಯಮಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಮಂಗಳೂರು ಇವರನ್ನು ವೇದಿಕೆಯ ರಾಜ್ಯಾಧ್ಯಕ್ಷ ಕೃಷ್ಣೇ ಗೌಡ ಅವರು ನೇಮಕ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶುಕ್ರವಾರ ನಡೆದ ರಾಜ್ಯ ಮಟ್ಟದ ಸಭೆಯಲ್ಲಿ ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಜಿಲ್ಲೆಯ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು , ಅನಿವಾಸಿ ಭಾರತೀಯರ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ದ.ಕ. ಜಿಲ್ಲಾ ಗೌರವ ಅಧ್ಯಕ್ಷರಾಗಿ ಸಾಹಿತಿ ಭಾಸ್ಕರ ರೈ ಕುಕ್ಕುವಳ್ಳಿ ಮಂಗಳೂರು, ಉಪಾಧ್ಯಕ್ಷರಾಗಿ ಬೆಟ್ಟಂಪಾಡಿ ನವೋದಯ ಪ್ರೌಢ ಶಾಲೆಯ ಧೈಹಿಕ ಶಿಕ್ಷಕ ದಯಾನಂದ ರೈ ಕೊರ್ಮಂಡ, ಪ್ರಧಾನ ಕಾರ್ಯದರ್ಶಿಯಾಗಿ ಎಸ್. ಅಬೂಬಕರ್ ಆರ್ಲಪದವು ಮತ್ತು ಕಾರ್ಯದರ್ಶಿಯಾಗಿ ಜಯರಾಮ ರೈ ನೀರ್ಪಾಡಿಯವರನ್ನು ನೇಮಿಸಲಾಗಿದೆ.
ಸಭೆಯಲ್ಲಿ ಗದಗ, ಚಿಕ್ಕಮಗಳೂರು, ಮಂಡ್ಯ, ಬೆಂಗಳೂರು, ಉತ್ತರಕನ್ನಡ, ದಾವಣಗೆರೆ ಮತ್ತು ಕೊಡಗು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.