ಮಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Update: 2016-03-26 20:20 IST
ಮಂಗಳೂರು, ಮಾ.26: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಗ್ರಾಮಾಂತರ ಇವರಿಂದ ಮೂಡಬಿದಿರೆ ಪುರಸಭೆ ವ್ಯಾಪ್ತಿಯ ತಾಕೊಡೆ ಕರಿಂಜೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮತ್ತು ಐಕಳ ಗ್ರಾ.ಪಂ.ನ ತಾಳಿಪಾಡಿ ದಾಮಸ್ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗಳಿಂದ ಅಂಗವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಳ್ತಂಗಡಿ: ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಶಿಶಿಲ ಗ್ರಾಮದ ದೇನೋಡಿ ಅಂಗನವಾಡಿ ಕೇಂದ್ರಕ್ಕೆ ಮತ್ತು ಪಡಂಗಡಿ ಗ್ರಾಮ ಪಂಚಾಯತ್‌ನ ಓಡೀಲು ಅಂಗನವಾಡಿ ಕೇಂದ್ರಕ್ಕೆ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎ. 18 ಕಡೆಯ ದಿನವಾಗಿದೆ.