×
Ad

ಮಡಿಕೇರಿ: ಮಾ.29ರಂದು ವಿದ್ಯುತ್ ವ್ಯತ್ಯಯ

Update: 2016-03-26 22:16 IST

ಮಡಿಕೇರಿ, ಮಾ.26: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಮಾ.29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಪೊನ್ನಂಪೇಟೆ, ವೀರಾಜಪೇಟೆ, ಶ್ರೀಮಂಗಲ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News