ಉಡುಪಿಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ
Update: 2016-03-27 12:39 IST
ಉಡುಪಿ, ಮಾ.27: ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ಹಾಗೂ ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮ ರವಿವಾರ ಬೆಳಗ್ಗೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಕಮಲ್ ಬಾಳಿಗಾ ಸಭಾಂಗಣದಲ್ಲಿ ಜರಗಿತು.
ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ಪ್ರೊ. ರಾಮದಾಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಬೆಂಗಳೂರಿನ ರಂಗಕರ್ಮಿ ಟಿ.ಎಸ್.ಲವಕುಮಾರ್ ಮಾತನಾಡಿದರು.
ರಂಗನಟಿ ಶಿಲ್ಪಾ ಜೋಶಿ, ಡಾ.ವಿರೂಪಾಕ್ಷ ದೇವರುಮನೆ ಉಪಸ್ಥಿತರಿದ್ದರು.
ನೀನಾಸಂ ಗಣೇಶ್ ಎಂ. ರಂಗಗೀತೆ ಹಾಡಿದರು. ಸಭಾ ಕಾರ್ಯಕ್ರಮದ ಬಳಿಕ ಉಡುಪಿಯ ಸುತ್ತಮುತ್ತಾ ಬಾಳಿಗಾ ತಂಡದಿಂದ ಬೀದಿ ನಾಟಕ ಪ್ರದರ್ಶನಗೊಂಡವು.