ಇಂದಿನಿಂದ ಸಚಿವರ ಪ್ರವಾಸ
Update: 2016-03-27 23:25 IST
ಬೆಂಗಳೂರು, ಮಾ. 27: ರಾಜ್ಯದ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಾ.28ರಂದು ಮತ್ತು 29ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇಲ್ಕಂಡ ಎರಡೂ ಜಿಲ್ಲೆಗಳಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧ ಲೋಕೋಪಯೋಗಿ ಇಲಾಖಾ ಅಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.