ಇಂದು ಬಿಬಿಎಂಪಿ ಬಜೆಟ್ ಮಂಡನೆ
10 ಸಾವಿರ ಕೋಟಿ ರೂ.ಮೊತ್ತದ ಆಯವ್ಯಯ ಬೆಂಗಳೂರು, ಮಾ. 27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಕಾರ ಹಿಡಿದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಮೊಟ್ಟ ಮೊದಲ ಬಜೆಟ್ ಮಾ.28ರಂದು ಕೌನ್ಸಿಲ್ ಸಭೆಯಲ್ಲಿ ಮಂಡನೆಯಾಗಲಿದ್ದು, 10 ಸಾವಿರ ಕೋಟಿ ರೂ.ಗಳಿಗೂ ಅಕ ಮೊತ್ತದ ಆಯವ್ಯಯ ಮಂಡನೆ ಆಗುವ ಸಾಧ್ಯತೆಗಳಿವೆ.
&16ನಗರ ವ್ಯಾಪ್ತಿಯ ಅಭಿವೃದ್ಧಿಗೆ ಹೊಸ ಯೋಜನೆಗಳು ಬರಲಿವೆ ಎಂದು ಅಂದಾಜು ಮಾಡಲಾಗಿದೆ. ಪಾಲಿಕೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜು ಆಯವ್ಯಯ ಮಂಡನೆ ಮಾಡಲಿದ್ದು, ಅತಿ ದೊಡ್ಡ ಮೊತ್ತದ ಬಜೆಟ್ ಎಂಬ ಹೆಗ್ಗಳಿಗೆ ಪಾತ್ರವಾಗಲಿದೆ.ನೆ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ,ಸಂಸ್ಕೃತಿ, ಕ್ರೀಡೆ, ಕಲ್ಯಾಣ,ರಸ್ತೆ, ಒಳಚರಂಡಿ, ಮೂಲಸೌಕರ್ಯ, ಆರೋಗ್ಯ, ತೋಟಗಾರಿಕೆ, ಕಾಮಗಾರಿ, ತ್ಯಾಜ್ಯ ವಿಲೇವಾರಿ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಗಳಿವೆ ಎಂದು ನಿರೀಕ್ಷಿಸಲಾಗಿದೆ. ನಗರ ವ್ಯಾಪ್ತಿಯ ಆಸ್ತಿ ತೆರಿಗೆ ಹೆಚ್ಚಳ: ಪ್ರತಿ ಸಾಲಿನಲ್ಲೂ ಆಸ್ತಿ ತೆರಿಗೆ ಹೆಚ್ಚಳ ಆಗುತ್ತಿದ್ದು, ಅದೇ ರೀತಿ ಈ ಬಾರಿಯ ಬಿಬಿಎಂಪಿ ಬಜೆಟ್‌ನಲ್ಲಿ ಆಸ್ತಿ ತೆರಿಗೆ ಹೆಚ್ಚಳ ಆಗುವ ಸಾಧ್ಯತೆಯಿದೆ. ಟೆಂಡರ್ ಪ್ರಕ್ರಿಯೆ, ರಸ್ತೆ ಗುಂಡಿಗಳಿಗೆ ಮುಕ್ತಿ ಹಾಗೂ ಸ್ವಚ್ಛತೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳು ಘೋಷಿಸುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.