ಸಿದ್ಧ ಉಡುಪು ಕಾರ್ಖಾನೆ ಮಹಿಳಾ ಕಾರ್ಮಿಕರ ಸಬಲೀಕರಣಕ್ಕೆ ಬದ್ಧ : ದಿನೇಶ್ ಗುಂಡೂರಾವ್
ಬೆಂಗಳೂರು, ಮಾ. 27: ನಗರದ ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರ ಸಬಲೀಕರಣಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ಭರವಸೆ ವ್ಯಕ್ತಪಡಿಸಿದ್ದಾರೆ.
ರವಿವಾರ ನಗರದ ಪುರಭವನದಲ್ಲಿ ಗಾರ್ಮೆಂಟ್ಸ್ ಕಾರ್ಮಿಕರ ಸಂಘ ಆಯೋಜಿಸಿದ್ದ ಮಹಿಳಾ ದಿನಾಚರಣೆ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಷ್ಟ್ರದ ರಪ್ತು ವಹಿವಾಟಿನಲ್ಲಿ ಗಾರ್ಮೆಂಟ್ಸ್ ವಲಯದ ಕೊಡುಗೆ ಅಪಾರವಾದದ್ದು. ಈ ವಲಯದಲ್ಲಿ ಹೆಚ್ಚು ಮಹಿಳೆಯರೆ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಲ್ಯಾಣಕ್ಕಾಗಿ ಸರಕಾರ ಹಲವು ಯೋಜನೆಗಳನ್ನು ಈಗಾಗಲೇ ರೂಪಿಸಿದೆ. ಈ ಕ್ಷೇತ್ರದ ಎಲ್ಲ ಮಹಿಳಾ ಕಾರ್ಮಿಕರಿಗೆ ಎಲ್ಲ ಬಗೆಯ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿದರು.ಾರ್ಯಕ್ರಮದಲ್ಲಿ ಐಎನ್‌ಟಿಯುಸಿ ರಾಜ್ಯ ಅಧ್ಯಕ್ಷ ಶಾಂತಕುಮಾರ್ ಮಾತನಾಡಿ, ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರು ಇಂದು ಅಸಂಘಟಿತ ಕಾರ್ಮಿಕರಾಗಿದ್ದಾರೆ. ಇದರಿಂದ ಸರಕಾರದ ಅನೇಕ ಸವಲತ್ತುಗಳಿಂದ ವಂಚಿತರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.ಾರ್ಮೆಂಟ್ಸ್ ಕಾರ್ಮಿಕರನ್ನು ಸಂಘಟಿಸುವ ಮೂಲಕ ಮಹಿಳಾ ಕಾರ್ಮಿಕರ ಮೇಲೆ ನಡೆಯುವ ದೌರ್ಜನ್ಯ, ಶೋಷಣೆ, ದೈಹಿಕ ಕಿರುಕುಳಗಳನ್ನು ತಪ್ಪಿಸಬಹುದು. ಆದುದದರಿಂದ ಮಹಿಳಾ ಕಾರ್ಮಿಕರ ರಕ್ಷಣೆ, ಆರೋಗ್ಯ, ಭವಿಷ್ಯದ ಭದ್ರತೆಗೆ ಕಾರ್ಮಿಕ ಸಂಘಟನೆಗಳು ಮುಂದಾಗಬೇಕು ಎಂದು ಹೇಳಿದರು.ಾರ್ಯಕ್ರಮದಲ್ಲಿ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಮತ್ತು ಇತರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಿಳೆಯರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್, ಐಎನ್‌ಟಿಯುಸಿ ಮಹಿಳಾ ಘಟಕದ ಅಧ್ಯಕ್ಷೆ ಮುತ್ತಕ್ಕಿ ಉತ್ತಯ್ಯ, ಮಹಿಳಾ ಹಕ್ಕುಗಳ ಹೋರಾಟಗಾರ್ತಿಸಿ.ಸಿ. ಹೇಮಲತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.