×
Ad

ಪರೀಕ್ಷೆಗೆ ಪೂರ್ವಭಾವಿ ತರಬೇತಿ

Update: 2016-03-27 23:38 IST

ಬೆಂಗಳೂರು, ಮಾ. 27: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 124 ನ್ಯಾಯಾಧೀಶರ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಮುಸ್ಲಿಮ್, ಕ್ರೈಸ್ತ, ಸಿಖ್, ಪಾರ್ಸಿ, ಬೌದ್ಧ ಹಾಗೂ ಜೈನ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನ್ಯಾಯಾಧೀಶರ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ನೇಮಕಾತಿ ಪರೀಕ್ಷೆಗೆ ಮುಂಚಿತವಾಗಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿ ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮಾ.14ರಂದು ಆದೇಶ ಹೊರಡಿಸಿದೆ.
 ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಮಾ.28 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು www.gokdom.kar.nic.inಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಪೀಪಲ್ಸ್ ಲಾಯೆರ್ಸ್‌ ಗಿಲ್ಡ್‌ನ ರಾಜ್ಯ ಸಂಚಾಲಕ ಅನೀಸ್ ಪಾಷಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News