×
Ad

ಕಲ್ಲು ಪುಡಿ ಗಣಿಗಾರಿಕೆ: 130 ಗುತ್ತಿಗೆ ನವೀಕರಣ

Update: 2016-03-27 23:39 IST

ಬೆಂಗಳೂರು, ಮಾ. 27: ರಾಜ್ಯದಲ್ಲಿ ಕಲ್ಲುಪುಡಿ ಗಣಿಗಾರಿಕೆಗೆ ಒಟ್ಟು 130 ಗುತ್ತಿಗೆಗಳನ್ನು ನವೀಕರಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ ಹಿರಿಯ ಸದಸ್ಯ ಶಿವಲಿಂಗೇಗೌಡ ಕೇಳಿದ ಲಿಖಿತ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಕಂದಾಯ ಮತ್ತು ಅರಣ್ಯ ಇಲಾಖೆಯ ಅಭಿಪ್ರಾಯವನ್ನು ಪಡೆದ ಬಳಿಕ ಉಳಿದವರಿಗೆ ಗುತ್ತಿಗೆ ನವೀಕರಣ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮೇಲ್ದರ್ಜೆ ಪ್ರಸ್ತಾವ ಇಲ್ಲ: ರಾಜ್ಯದಲ್ಲಿನ ಗ್ರಾಮ ಪಂಚಾಯತ್‌ಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ ಹೇಳಿದ್ದಾರೆ.
ವಿಧಾನ ಸಭೆಯಲ್ಲಿ ಜೆಡಿಎಸ್ ಸದಸ್ಯನಾರಾಯಣಗೌಡ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, 2011ರ ಜನಗಣತಿಯನ್ವಯ 15ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಲು ಸಂಪುಟದಲ್ಲಿ ತೀರ್ಮಾಸಿದ್ದು, ಅದರಂತೆ ಈಗಾಗಲೇ 57 ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದು ಸ್ಪಷ್ಟಣೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News