ಟ್ವೆಂಟಿ-20: ಗಾಯಾಳು ಯುವಿ ಬದಲಿಗೆ ಮನೀಷ್ ಪಾಂಡೆಗೆ ಸ್ಥಾನ
Update: 2016-03-28 22:48 IST
ಮೊಹಾಲಿ, ಮಾ.28: ವೆಸ್ಟ್‌ಇಂಡೀಸ್ ವಿರುದ್ಧ ಗುರುವಾರ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್‌ನ ಸೆಮಿಫೈನಲ್‌ನಲ್ಲಿ ಗಾಯಾಳು ಆಲ್‌ರೌಂಡರ್ ಯುವರಾಜ್ ಸಿಂಗ್ ಬದಲಿಗೆ ಕರ್ನಾಟಕದ ದಾಂಡಿಗ ಮನೀಷ್ ಪಾಂಡೆ ಸ್ಥಾನ ಗಿಟ್ಟಿಸಿಕೊಂಡಿದ್ಧಾರೆ.
ಯುವರಾಜ್ ಸಿಂಗ್ ರವಿವಾರ ನಡೆದ ಆಸ್ಟ್ರೇಲಿಯ ವಿರುದ್ಧದ ಟ್ವೆಂಟಿ-20 ಪಂದ್ಯದಲ್ಲಿ ಗಾಯಗೊಂಡಿದ್ದರು. ಅವರು ಸೆಮಿಫೈನಲ್ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆ ಕಂಡು ಬಾರದ ಹಿನ್ನೆಲೆಯಲ್ಲಿ ಅವರ ಬದಲಿಗೆ ಪಾಂಡೆ ಅವರನ್ನು ಆಯ್ಕೆ ಸಮಿತಿಯು ತಂಡಕ್ಕೆ ಸೇರಿಸಿಕೊಳ್ಳುವ ತಯಾರಿ ನಡೆಸಿದೆ.
ಕಳೆದ ವರ್ಷ ಭಾರತ ಆಸ್ಟ್ರೇಲಿಯ ಪ್ರವಾಸ ಕೈಗೊಂಡಿದ್ದ ವೇಳೆ ಪಾಂಡೆ ಅವರು ತನ್ನ ಏಕದಿನ ಪಂದ್ಯದಲ್ಲಿ ಶತಕ ದಾಖಲಿಸಿ ಗಮನ ಸೆಳೆದಿದ್ದರು. ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆ ಹೊಂದಿರುವ ಪಾಂಡೆ ಐಪಿಎಲ್‌ನಲ್ಲಿ ಶತಕ ದಾಖಲಿಸಿದ ಮೊದಲ ದಾಂಡಿಗ.