×
Ad

ನೆತ್ತೋಡಿ: ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರ ಕ್ರೀಡಾಕೂಟ

Update: 2016-03-28 23:40 IST

ಮೂಡುಬಿದಿರೆ, ಮಾ.28: ಇಲ್ಲಿನ ನೆತ್ತೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಹಳೆ ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಮಕ್ಕಳ ಪೋಷಕರಿಗೆ ಕ್ರೀಡಾಕೂಟವು ಶಾಲಾ ಆವರಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಪುರಸಭಾ ಸದಸ್ಯೆ ಹರಿಣಾಕ್ಷಿ ಎಸ್. ಸುವರ್ಣ ಉದ್ಘಾಟಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯಶಿಕ್ಷಕಿ ಅನಿತಾ ಎಂ.ಎ., ಸಹಶಿಕ್ಷಕಿ ವನಿತಾ ಸೆಲಿನ್ ಡಿಸಿಲ್ವ, ಶ್ರೀಧರ್ ಕೆಮ್ಮಾರ್, ಸದಾನಂದ ಸುವರ್ಣ, ಸಂಪತ್ ಕುಮಾರ್ ಉಪಸ್ಥಿತರಿದ್ದರು.
ನೆತ್ತೋಡಿ ಫ್ರೆಂಡ್ಸ್ ಅಧ್ಯಕ್ಷ ಸುರೇಶ್ ಕುಮಾರ್ ಸ್ವಾಗತಿಸಿದರು. ವಿಜಯ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಕೀರ್ತಿ ಸುವರ್ಣ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News