ಸುಳ್ಯ: ವಿಷಯಾಧಾರಿತ ಶಿಕ್ಷಣ, ಜಾಗೃತಿ ಕಾರ್ಯಕ್ರಮ
ಸುಳ್ಯ, ಮಾ.28: ನೆಹರೂ ಯುವ ಕೇಂದ್ರ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಜಿಲ್ಲಾ ಮತ್ತು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಟ್ಟಿಪಳ್ಳದ ಕಪಿಲಾ ಯುವಕ ಮಂಡಲ, ಕೆವಿಜಿ ಪಾಲಿಟೆಕ್ನಿಕ್‌ನ ಎನ್‌ಎಸ್‌ಎಸ್ ಘಟಕ ಹಾಗೂ ಸುಳ್ಯದ ತುಡರ್ ತುಳು ಕೂಟಗಳ ಆಶ್ರಯದಲ್ಲಿ ವಿಷಯಾಧಾರಿತ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ವಿಶ್ವ ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸುಳ್ಯದ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ ನಡೆಯಿತು.
ಉದ್ಯಾನವನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಾಯಿಗೀ ತಾ ಜ್ಞಾನೇಶ್ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯ ದೇವ್, ತುಳು ಅಕಾಡಮಿ ಸದಸ್ಯ ಕೆ.ಟಿ.ವಿಶ್ವನಾಥ್, ಕೆವಿಜಿ ಪಾಲಿಟೆಕ್ನಿಕ್‌ನ ಎನ್‌ಎಸ್‌ಎಸ್ ಕಾರ್ಯಕ್ರ ಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಮಾತನಾಡಿದರು.
ಪ್ರಶಸ್ತಿ ವಿಜೇತ ಜಾನಪದ ಕಲಾವಿದೆ ಕೊರೊಪೊಳು ಜಯನಗರರನ್ನು ಸನ್ಮಾನಿಸಲಾಯಿತು. ಮಹಿಳೆಯರಿಗೆ ಸ್ಥಳದಲ್ಲಿಯೇ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ನೀಡ ಲಾಯಿತು. ನಾಯಕತ್ವ ಕುರಿತು ಬಿ.ಎಸ್.ಶರೀಫ್ ಮತ್ತು ಸಂವಹನ ಕಲೆ ಕುರಿತು ಡಾ.ಅನುರಾಧಾ ಕುರುಂಜಿ ಮಾತನಾಡಿದರು. ಸುಳ್ಯ ಪಪಂ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಪ್ರಫುಲ್ಲಾ ಪಿ.ರೈ, ಗೌರವಾಧ್ಯಕ್ಷೆ ಹರಿಣಿ ಸದಾಶಿವ, ಕಪಿಲ ಯುವಕ ಮಂಡಲದ ಅಧ್ಯಕ್ಷ ಜೀವನ್ ಕೋಲ್ಚಾರ್, ಸುಳ್ಯ ತುಡರ್ ತುಳು ಕೂಟದ ಅಧ್ಯಕ್ಷ ಜೆ.ಕೆ.ರೈ ಉಪಸ್ಥಿತರಿದ್ದರು. ಲಲಿತಾ ಸ್ವಾಗತಿಸಿ, ಚಂದ್ರಾಕ್ಷಿ ಜೆ.ರೈ ವಂದಿಸಿದರು. ಚಿತ್ರಲೇಖಾ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.