ಪುತ್ತೂರು: ಸರಕಾರಿ ಕಾಲೇಜಿನ ವಾರ್ಷಿಕೋತ್ಸವ
ಪುತ್ತೂರು, ಮಾ.28: ವಿದ್ಯಾರ್ಥಿಗಳು ಶಿಕ್ಷಣವನ್ನು ಅಂಕದ ದೃಷ್ಟಿಯಿಂದ ಮಾತ್ರ ಪರಿಗಣಿಸದೆ ಸಮಾಜ ಕಟ್ಟುವ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕು ಎಂದು ಶಾಸಕಿ ಹಾಗೂ ರಾಜ್ಯ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.
ನಗರದ ಪುರಭವನದಲ್ಲಿ ನಡೆದ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುಟ್ಟಣ್ಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಆ್ಯಂಟನಿ ಟಿ.ಪಿ. ಮಾತನಾಡಿದರು.
ಕಾಲೇಜಿನ ದೈ. ಶಿ. ನಿರ್ದೇಶಕ ಸೇಸಪ್ಪ, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸಂತೋಷ್ ಬಿ., ಕಾರ್ಯದರ್ಶಿ ಜಯಂತ್, ಸಹ ಕಾರ್ಯದರ್ಶಿ ನಿಶ್ಮಿತಾ ರೈ, ಸಮಿತ್ ಪಿ., ಕ್ರೀಡಾ ಕಾರ್ಯದರ್ಶಿ ದೀಪಕ್, ಪ್ರಜ್ವಲ್ ಡಿಸೋಜ, ಕೃತಿಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ನಳಿನಾಕ್ಷಿ ಎ.ಎಸ್. ವರದಿ ವಾಚಿಸಿದರು. ಸಾಂಸ್ಕೃತಿಕ ಸಂಘದ ಸಂಚಾಲಕಿ ಸುಜಾತಾ ಪಿ.ಎಸ್. ಸ್ವಾಗತಿಸಿದರು. ಪವನಾ ವಂದಿಸಿದರು. ವಜ್ರೇಶ್ ಕಾರ್ಯಕ್ರಮ ನಿರೂಪಿಸಿದರು.