ನರಿಕೊಂಬು: ನೇಣು ಬಿಗಿದು ಚಾಲಕ ಆತ್ಮಹತ್ಯೆ
Update: 2016-03-28 23:51 IST
ಬಂಟ್ವಾಳ, ಮಾ. 28: ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಲಾರಿ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಸ್ಥಳೀಯ ನಾಯಿಲ ನಿವಾಸಿ ವಿಜಯ (60) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹೊರಗಿನ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.