×
Ad

ಫಿಲೋಮಿನಾ: ಗ್ರಾಮೀಣ ಕ್ರೀಡೋತ್ಸವ ಸಮಾರೋಪ

Update: 2016-03-28 23:51 IST

ಪುತ್ತೂರು, ಮಾ.28: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ಏರ್ಪಡಿಸಲಾದ ತುಳು ಜಾನಪದ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಸಂಚಾಲಕ ಅತಿ ವಂ. ಆಲ್ಫ್ರೆಡ್ ಜೆ ಪಿಂಟೊ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ರಾಮಕುಂಜದ ಶ್ರೀ ರಾಮಕುಂಜೇಶ್ವರ ಕಾಲೇಜು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯ ಪ್ರೊ.ಲಿಯೊ ನೊರೊನ್ಹ, ಉಪ ಪ್ರಾಚಾರ್ಯ ಪ್ರೊ. ವಿಷ್ಣು ಭಟ್ ಮತ್ತು ಕ್ರೀಡೋತ್ಸವದ ಸಂಯೋಜಕ ಪ್ರೊ. ಝುಬೈರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News