ಸೋಮೇಶ್ವರ: ಸಮುದಾಯ ಭವನಕ್ಕೆ ಶಿಲಾನ್ಯಾಸ

Update: 2016-03-28 18:23 GMT

ಉಳ್ಳಾಲ, ಮಾ.28: ದೇವಸ್ಥಾನಗಳು ಭಕ್ತರನ್ನು ಸಂಘಟಿಸುವ ಕೇಂದ್ರ ಸ್ಥಾನವಾಗಿದ್ದು, ಇಲ್ಲಿ ಸಮುದಾಯ ಭವನ ನಿರ್ಮಾಣ ಕಾರ್ಯ ಅತೀ ಅಗತ್ಯವಾಗಿದ್ದು, ಸಂಸದನ ನೆಲೆಯಲ್ಲಿ ಕಾನೂನಿನ ಇತಿಮಿತಿಯಲ್ಲಿ 10 ಲಕ್ಷ ರೂ. ಅನುದಾನ ನೀಡಲು ಬದ್ಧನಾಗಿದ್ದೇನೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ಅಭಿಪ್ರಾಯಪಟ್ಟರು. ಅವರು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಸಮು ದಾಯ ಭವನ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಸೋಮೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾಪಂ ಸದಸ್ಯರಾದ ರವಿ ಶಂಕರ್, ರಾಮಚಂದ್ರ ಕುಂಪಲ, ಸೋಮೇಶ್ವರ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಕೆ.ಸುಧಾಕರ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ ಕುತ್ತಾರ್ , ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್, ಸೋಮೇಶ್ವರ ಮೂರೂರ ಬೋವಿ ಮಹಾಸಭಾ ಅಧ್ಯಕ್ಷ ಪ್ರಕಾಶ್ ಎನ್.ಎ. ಹಾಗೂ ಗಟ್ಟಿ ಸಮಾಜದ ಹಿರಿ ಯರಾದ ನಾರಾಯಣ ಬಿ.ಗಟ್ಟಿ ಮೇಲ್ಡರು ಉಪಸ್ಥಿತರಿದ್ದರು.
 
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ನ್ಯಾಯವಾದಿ ಬಿ.ಬಿ. ರವೀಂದ್ರನಾಥ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News