ಎ.4ರಂದು ಮೆಹಬೂಬ ಜಮ್ಮು -ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ಸಾಧ್ಯತೆ
Update: 2016-03-29 10:20 IST
ಶ್ರೀನಗರ, ಮಾ.29: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಎಪ್ರಿಲ್ 4 ರಂದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಕಂಡು ಬಂದಿದೆ.
ಪಿಡಿಪಿ-ಬಿಜೆಪಿ ಮೈತ್ರಿ ಕೂಟ ಈಗಾಗಲೇ ರಾಜ್ಯಪಾಲ ಎಂಎನ್ ವೋರಾ ಅವರನ್ನು ಭೇಟಿಯಾಗಿ ಸರಕಾರ ರಚನೆ ಬಗ್ಗೆ ಮಾತುಕತೆ ನಡೆಸಿದ್ದು, ಕಣಿವೆ ರಾಜ್ಯದಲ್ಲಿ ಪಿಡಿಪಿಯು ಬಿಜೆಪಿಯ 25 ಶಾಸಕರ ಬೆಂಬಲದೊಂದಿಗೆ ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ.87 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಪಿಡಿಪಿಯು 27 ಸದಸ್ಯರನ್ನುಹೊಂದಿವೆ.
56ರ ಹರೆಯದ ಮೆಹಬೂಬ ರಾಜ್ಯದ ಮೊದಲ ಮಹಿಳಾ ಮುಖ್ಯ ಮಂತ್ರಿ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ದೇಶದ ಮೊದಲ ಮುಸ್ಲಿಮ್ ಮಹಿಳಾ ಮುಖ್ಯಮಂತ್ರಿಯಾಗಿ ಇತಿಹಾಸ ಬರೆಯಲಿದ್ದಾರೆ.