ಡಾ.ಎಸ್.ಎಲ್.ಭೈರಪ್ಪ, ಡಾ.ಸಿ.ಎನ್.ಮಂಜುನಾಥ್ ಹಾಗೂ ಎ.ಜೆ.ಶೆಟ್ಟಿ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್.
ಮಂಗಳೂರು, ಮಾ. 29: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಬೆಂಗಳೂರಿನ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಹಾಗೂ ಎಜೆ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನ ಅಧ್ಯಕ್ಷ ಎ.ಜೆ. ಶೆಟ್ಟಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪ್ರಸಕ್ತ ಸಾಲಿನ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಮಾ. 30ರಂದು ಕೊಣಾಜೆಯ ಮಂಗಳ ಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 34ನೆ ಪದವಿ ಪ್ರದಾನ ಸಮಾರಂಭದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.
ಡಾ.ಭೈರಪ್ಪ: ಡಾ.ಎಸ್.ಎಲ್.ಭೈರಪ್ಪ ಅವರು ಕನ್ನಡದಲ್ಲಿ 25ಕ್ಕೂ ಹೆಚ್ಚು ಕಾದಂಬರಿ ಬರೆದಿದ್ದು, ಇಂಗ್ಲಿಷ್, ಹಿಂದಿ, ಸಂಸ್ಕೃತ, ಮರಾಠಿ, ಉರ್ದು, ಗುಜರಾತಿ, ತೆಲುಗು, ಬಂಗಾಳಿ ಮತ್ತು ತಮಿಳು ಭಾಷೆಗೆ ಅನುವಾದಗೊಂಡಿವೆ. ಕೆಲವು ಪ್ರಸಿದ್ಧ ಕಾಂಬರಿಗಳು ಹಲವು ಬಾರಿ ಮರುಮುದ್ರಣಗೊಂಡಿವೆ. ಇತ್ತೀಚೆಗೆ ಪದ್ಮಶ್ರೀ ಸಹಿತ ಹಲವಾರು ಹಲವಾರು ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ.
ಡಾ.ಮಂಜುನಾಥ್: ಬೆಂಗಳೂರಿನ ಜಯದೇವ ಇನ್‌ಸ್ಟಿಟ್ಯೂಟ್ ಆ್ ಕಾರ್ಡಿಯೋವ್ಯಾಸ್ಕ್ಯುಲರ್ ಸೈನ್ಸಸ್ ಆ್ಯಂಡ್ ರಿಸರ್ಚ್‌ನ ನಿರ್ದೇಶಕರಾಗಿರುವ ಡಾ.ಸಿ.ಎನ್.ಮಂಜುನಾಥ್, ಪ್ರಸಿದ್ಧ ಹೃದ್ರೋಗ ತಜ್ಞರಾಗಿ ವಿಶ್ವದಲ್ಲೇ ಅತೀ ದೊಡ್ಡ ಹೃದ್ರೋಗ ಚಿಕಿತ್ಸಾ ಕೇಂದ್ರ ಆರಂಭಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲೂ ತಮ್ಮ ಸೇವೆ ನೀಡಿದ್ದಾರೆ. ಸಾವಿರಕ್ಕೂ ಹೆಚ್ಚು ಮಂದಿಗೆ ತೆರೆದ ಹೃದಯ ಶಸಕ್ರಿಯೆ ನಡೆಸಿರುವ ಅವರು, ದಾನಿಗಳ ನೆರವಿನಿಂದ 25 ಕೋಟಿ ರೂ.ಗೂ ಮಿಕ್ಕಿದ ವೈದ್ಯಕೀಯ ನೆರವು ನೀಡಿದ್ದಾರೆ.
ಎ.ಜೆ.ಶೆಟ್ಟಿ: ಎ.ಜೆ.ಗ್ರೂಪ್ ಆ್ ಇನ್‌ಸ್ಟಿಟ್ಯೂಶನ್ಸ್ ಮತ್ತು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾಗಿರುವ ಎ.ಜೆ.ಶೆಟ್ಟಿ, ಸಣ್ಣ ಕೈಗಾರಿಕೆಯಿಂದ ಉದ್ಯಮಿಯವಾಗಿ ಬೆಳೆದವರು. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹಲವರಿಗೆ ಉದ್ಯೋಗ ನೀಡಿರುವ ಅವರು, ಪ್ರತಿದಿನ ಸಾಕಷ್ಟು ಮಂದಿಗೆ ಬಡವರಿಗೆ ಉಚಿತ ಚಿಕಿತ್ಸೆಯನ್ನು ನೀಡುವ ಕಾರ್ಯ ಇವರು ತಮ್ಮ ಸಂಸ್ಥೆಯ ಮೂಲಕ ಮಾಡುತ್ತಿದ್ದಾರೆ. ನ್ಯಾಷನಲ್ ಕಾರ್ಪೊರೇಟ್ ಎಕ್ಸಲೆನ್ಸ್ ಅವಾರ್ಡ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ.