ಬೆಳ್ತಂಗಡಿ : ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತ
Update: 2016-03-29 20:26 IST
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕೂಡಿಗೆ ಎಂಬಲ್ಲಿ ಸ್ನಾನಕ್ಕೆಂದು ನೇತ್ರಾವತಿ ನದಿಗೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಮೃತ ಯುವಕ ಧರ್ಮಸ್ಥಳ ಗ್ರಾಮದ ಮುಳಿಕಾರು ನಿವಾಸಿ ಕೊರಗಪ್ಪ ಮಲೆಕುಡಿಯ ಯಾನೆ ಪ್ರಸಾದ ಎಂಬಾತನಾಗಿದ್ದಾನೆ. ಈತ ಸ್ನಾನಕ್ಕೆಂದು ನೀರಿಗೆ ಇಳಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ್ದು ಈಜು ಬಾರದ ನೀರು ಪಾಲಾಗಿದ್ದಾನೆ. ಮೃತನ ಮನೆಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.