×
Ad

ಸಾಲ ಬಾಧೆ: ನೇಣು ಬಿಗಿದು ರೈತ ಆತ್ಮಹತ್ಯೆ

Update: 2016-03-29 22:21 IST

ಶಿವಮೊಗ್ಗ, ಮಾ. 29: ಸಾಲ ಬಾಧೆಯಿಂದ ಬೇಸತ್ತು ರೈತರೊಬ್ಬರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಅದೇ ಗ್ರಾಮದ ನಿವಾಸಿ ನಾಗರಾಜಪ್ಪ (60) ಆತ್ಮಹತ್ಯೆ ಮಾಡಿಕೊಂಡ ರೈತ. ರಾತ್ರಿ ಅಡಿಕೆ ತೋಟದಲ್ಲಿ ಕೆಲಸವಿದೆಯೆಂದು ಮನೆಯಲ್ಲಿ ಹೇಳಿ ತೆರಳಿದ್ದರು. ಬೆಳಗ್ಗೆ ಇವರ ಕುಟುಂಬದ ಸದಸ್ಯರು ತೋಟಕ್ಕೆ ತೆರಳಿದಾಗ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗರಾಜಪ್ಪ ಕಾರ್ಪೊರೇಷನ್ ಹಾಗೂ ವೈಶ್ಯ ಬ್ಯಾಂಕ್‌ನಲ್ಲಿ ಸುಮಾರು 2.20 ಲಕ್ಷ ರೂ. ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿಯೇ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಸಬ್ ಇನ್‌ಸ್ಪೆಕ್ಟರ್ ನರಸಿಂಹಯ್ಯರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News