ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಮನೆಗೆ ಸಚಿವ ಖಾದರ್ ಭೇಟಿ
Update: 2016-03-29 22:39 IST
ಮಂಗಳೂರು, ಮಾ. 29: ನಗರದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಮನೆಗೆ ಮಂಗಳವಾರ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಸಂಬಂಧಿಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಚಿವರಿಗೆ ಮಾಹಿತಿ ನೀಡಿದ ಸಂಬಂಧಿಕರು ‘‘ಬಾಳಿಗಾರಿಗೆ ಯಾವುದೇ ಬೆದರಿಕೆ ಕರೆ ಬಂದಿರಲಿಲ್ಲ. ನಗರ ಪೊಲೀಸ್ ಆಯುಕ್ತರು ತಮ್ಮಂದಿಗೆ ನಿಕಟ ಸಂಪರ್ಕದಲ್ಲಿದ್ದು, ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ ಎಂದರು.
ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಹಂತಕರು ಎಷ್ಟೇ ಬಲಾಢ್ಯರಾದರೂ ಶೀಘ್ರದಲ್ಲೇ ಪತ್ತೆ ಹಚ್ಚಿ ಬಂಧಿಸಲು ಪೊಲೀಸರು ಶಕ್ತರಾಗಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆ ಸಮರ್ಕಕವಾಗಿ ನಡೆಯುತ್ತಿದೆ ಎಂದರು.
ಭೇಟಿಯ ಸಂದರ್ಭದಲ್ಲಿ ಮಾಜಿ ಮೇಯರ್ ಮಹಾಬಲ ಮಾರ್ಲ, ಪಾಲಿಕೆ ಸದಸ್ಯರಾದ ಎ.ಸಿ.ವಿನಯರಾಜ್, ಕವಿತಾ ವಾಸು, ಪ್ರಕಾಶ್ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.