ಎ.3ಕ್ಕೆ ಚಂದ್ರೋದಯ ಸಂಸ್ಮರಣಾ ಗ್ರಂಥ ಲೋಕಾರ್ಪಣೆ
Update: 2016-03-30 22:38 IST
ಬೆಂಗಳೂರು, ಮಾ. 30: ಅಂಧ ಕಲಾವಿದ ಎಸ್.ಚಂದ್ರಕುಮಾರ್ ಸ್ಮರಣಾರ್ಥ ಚಂದ್ರೋದಯ ಸಂಸ್ಮರಣಾ ಗ್ರಂಥ ಲೋಕಾರ್ಪಣ ಸಮಾರಂಭವನ್ನು ಎ.3ರಂದು ನಗರದ ನಯನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಅಂಧರ ವಿಮೋಚನ ವೇದಿಕೆಯ ಅಧ್ಯಕ್ಷ ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.
ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಈಶ್ವರ್ ದೈತೋಟ, ನಿರ್ದೇಶಕ ಟಿ.ಎಸ್.ನಾಗಾಭರಣ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ, ಚಂದ್ರೋದಯ ಸಂಪಾದಕ ಜಾಣಗೆರೆ ವೆಂಕಟರಾಮಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.