ವಿದ್ಯಾರ್ಥಿ ಗುಂಪಿನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಬೆಂಗಳೂರು, ಮಾ. 30: ತುಮಕೂರಿನಲ್ಲಿ ಕರಪತ್ರಗಳನ್ನು ಹಂಚುತ್ತಿದ್ದ ಎಐಎಸ್‌ಎ್ ಮತ್ತು ಎಐವೈಎ್ ಸಂಘಟನೆಗಳ ವಿದ್ಯಾರ್ಥಿ ಗುಂಪಿನ ಮೇಲೆ ಹಲ್ಲೆ ನಡೆಸಿರುವ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಆಗ್ರಹಿಸಿದೆ.
ಜೆಎನ್‌ಯು ವಿದ್ಯಾರ್ಥಿ ಗಂಘದ ಕನ್ಹಯ್ಯಾಕುಮಾರ್ ಮೇಲಿನ ದೇಶದ್ರೋಹ ಆರೋಪ ಮತ್ತು ಹೈದರಾಬಾದ್ ವಿವಿಯ ವಿದ್ಯಾರ್ಥಿ ನಾಯಕ ರೋಹಿತ್ ವೇಮುಲಾ ಆತ್ಮಹತ್ಯೆ ಘಟನೆಗಳ ವಿರುದ್ಧ ಬುಧವಾರ ತುಮಕೂರು ವಿಶ್ವ ವಿದ್ಯಾನಿಲಯ ಮತ್ತು ಜೂನಿಯರ್ ಕಾಲೇಜು ಮುಂಭಾಗ ಶಾಂತಿಯುತವಾಗಿ ಕರಪತ್ರ ಹಂಚುವ ವೇಳೆ ವಿದ್ಯಾರ್ಥಿಗಳ ಮೇಲೆ ಏಕಾಏಕಿ 70-80 ಮಂದಿಯಿದ್ದ ಗುಂಪೊಂದು ಹಲ್ಲೆ ನಡೆಸಿದೆೆ ಎಂದು ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಪಿ.ವಿ.ಲೋಕೇಶ್ ಆರೋಪಿಸಿದ್ದಾರೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ನಾಯಕ ಕಾಂ. ಚಿನ್ನಪ್ಪರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಗುಂಪು ಎಬಿವಿಪಿ ಸಂಘ ಪರಿವಾರ ಮತ್ತು ಬಿಜೆಪಿಯನ್ನು ಟೀಕಿಸುವ ಮತ್ತು ವಿರೋಸುವ ಎಲ್ಲರನ್ನೂ ಸದೆಬಡಿಯುವುದಾಗಿ ಬಹಿರಂಗವಾಗಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ.ಘಟನೆ ಪ್ರಜಾಪ್ರಭುತ್ವದ ಅಭಿವ್ಯಕ್ತಿ ಸ್ವಾತಂತ್ರ ಹಾಗೂ ಪ್ರತಿಭಟಿಸುವ ಹಕ್ಕುಗಳ ದಮನಗೊಳಿಸುವ ಹುನ್ನಾರವಾಗಿದೆ. ಹೀಗಾಗಿ ಕೂಡಲೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಸಂಘಪರಿವಾರದ ಸದಸ್ಯರ ಮೇಲೆ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.