×
Ad

ಸರಕಾರಿ ಹಾಸ್ಟೆಲ್ ನೌಕರರ ಪ್ರತಿಭಟನೆ

Update: 2016-03-30 22:43 IST

ಬೆಂಗಳೂರು, ಮಾ. 30: ನೇರ ನೇಮಕಾತಿ ಕೈಬಿಟ್ಟು ಸರಕಾರಿ ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಲ್ಲಿ ದುಡಿಯುತ್ತಿರುವ ಹೊರ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಂಘಟನೆ ಅಧ್ಯಕ್ಷ ನಿತ್ಯಾನಂದಸ್ವಾಮಿ ಅವರ ನೇತೃತ್ವದಲ್ಲಿಂದು ನೂರಾರು ನೌಕರರು ಪಾಲ್ಗೊಂಡು ಎಲ್ಲ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಹಾಗೂ ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಅಡುಗೆ ಅಥವಾ ಅಡುಗೆ ಸಹಾಯಕರಾಗಿ ಶ್ರಮಿಸುತ್ತಿರುವ ಎಲ್ಲ ಹೊರಗುತ್ತಿಗೆ ನೌಕರರನ್ನು ಆಯಾ ಹುದ್ದೆಗಳಲ್ಲಿ ಖಾಯಂ ಮಾಡಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News