×
Ad

‘ದರ್ಪಣ-2016’: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

Update: 2016-03-31 23:46 IST

ಕೊಣಾಜೆ, ಮಾ.31: ಮಂಗಳೂರು ವಿವಿಯನ್ನು ಪ್ರತಿನಿಧಿಸಿ ಕ್ರೀಡೆ ಮತ್ತು ಸಾಂಸ್ಕ ೃತಿಕ ಕ್ಷೇತ್ರದಲ್ಲಿ ಅಂತರ್ ವಿವಿ ಮಟ್ಟದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸುವ ‘ದರ್ಪಣ’-2016’ ಕಾರ್ಯಕ್ರಮವು ಮಂಗಳಾ ಅಡಿಟೋರಿ ಯಂನಲ್ಲಿ ಗುರುವಾರ ನಡೆಯಿತು.

ಸಮಾರಂಭದಲ್ಲಿ ಆಳ್ವಾಸ್ ಮೂಡುಬಿದಿರೆ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡರೆ ಉಜಿರೆ ಎಸ್‌ಡಿಎಂ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಅಲೋಶಿಯಸ್ ಕಾಲೇಜು ತೃತೀಯ ಸ್ಥಾನವನ್ನು ಪಡೆದುಕೊಂಡಿತು. ಈ ಸಂದರ್ಭದಲ್ಲಿ 2015-16ನೆ ಸಾಲಿನಲ್ಲಿ ನಡೆದ ಕ್ರೀಡಾ ಕ್ಷೇತ್ರದ ಸಾಧಕರಿಗೆ ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಯಿತು.

ಭಾರತೀಯ ಹಾಕಿ ತಂಡದ ಮಾಜಿ ಕಪ್ತಾನ, ಅರ್ಜುನ ಪ್ರಶಸ್ತಿ ಪುರಸ್ಕೃತ ಅರ್ಜುನ್ ಹಾಲಪ್ಪ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಮೂಡು ಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಪ್ರೊ. ಕಬಡ್ಡಿ ಆಟಗಾರ ಸಚಿನ್ ಸುವರ್ಣ ಭಾಗವಹಿಸಿದ್ದರು. ಪ್ರೊ.ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ಮೈಸೂರು ಸಂತ ಫಿಲೋಮಿನ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣೇಗೌಡ ಮಾತನಾಡಿದರು. ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡಾ.ಉದಯ ಕುಮಾರ್ ಬಾರ್ಕೂರು, ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಿಶೋರ್ ಕುಮಾರ್, ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಪಿ.ಕೆ., ರಮೇಶ್ ಎಚ್.ಎಂ. ಉಪಸ್ಥಿತರಿದ್ದರು. ಡಾ.ಸಂತೋಷ್ ಜೆರಾಲ್ಡ್ ಡಿಸೋಜ ಸ್ವಾಗತಿಸಿದರು. ಪತ್ರಕರ್ತ ಮನೋ ಹರ್ ಪ್ರಸಾದ್ ಹಾಗೂ ಮಧು ಮಾಯಿಲಂಕೋಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News