190 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಶಿವಮೊಗ್ಗ, ಎ. 1: ಮುಂದಿನ 15 ದಿನಗಳಲ್ಲಿ ಮಳೆಯಾಗದಿದ್ದರೆ, ಶಿವಮೊಗ್ಗ ಜಿಲ್ಲೆಯ ಏಳು ತಾಲೂಕು ವ್ಯಾಪ್ತಿಯ 190 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ತಲೆದೋರಲಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರ ಪ್ರಕಾರ ಮುಂದಿನ ಕೆಲ ದಿನಗಳಲ್ಲಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಜೀವ ಜಲಕ್ಕೆ ತೀವ್ರ ತತ್ವಾರ ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಎಸ್.ಎಂ.ಹರೀಶ್ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ 15 ದಿನಗಳಲ್ಲಿ ಸಮಸ್ಯೆ ಕಂಡುಬರಬಹುದಾದ ಗ್ರಾಮಗಳನ್ನು ಸಮಸ್ಯಾತ್ಮಕವೆಂದು, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತಹ ಪರಿಸ್ಥಿತಿಯಿರುವ ಗ್ರಾಮಗಳನ್ನು ಅತೀ ಸಮಸ್ಯಾತ್ಮಕವೆಂದು ಹಾಗೂ ಮುಂದಿನ ಒಂದೂವರೆ ತಿಂಗಳಲ್ಲಿ ಕುಡಿಯುವ ನೀರು ಸಮಸ್ಯೆ ಉದ್ಭವವಾಗಬಹುದಾದ ಗ್ರಾಮಗಳನ್ನು ಸಾಧಾರಣ ಸಮಸ್ಯಾತ್ಮಕ ಗ್ರಾಮಗಳೆಂಬ ಪಟ್ಟಿಯನ್ನು ಇಲಾಖೆಯು ಸಿದ್ಧಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ. 190 ಗ್ರಾಮಗಳನ್ನು ಸಮಸ್ಯಾತ್ಮಕ ಪಟ್ಟಿಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 42, ತೀರ್ಥಹಳ್ಳಿಯಲ್ಲಿ 17, ಸಾಗರ 38, ಹೊಸನಗರ 29, ಶಿಕಾರಿಪುರ 8, ಸೊರಬ 55 ಹಾಗೂ ಭದ್ರಾವತಿಯಲ್ಲಿ 1 ಗ್ರಾಮವಿದೆ. ಈಗಾಗಲೇ ಹಲವು ಗ್ರಾಮಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಪೂರ್ವಭಾವಿ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹರೀಶ್ ಮಾಹಿತಿ ನೀಡಿದ್ದಾರೆ. ಉಳಿದಂತೆ ಸಾಧಾರಣ ಸಮಸ್ಯಾತ್ಮಕ ಪಟ್ಟಿಯಲ್ಲಿ 169 ಗ್ರಾಮಗಳನ್ನು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 11, ಭದ್ರಾವತಿಯಲ್ಲಿ 13, ತೀರ್ಥಹಳ್ಳಿಯಲ್ಲಿ 15, ಸಾಗರ 46, ಹೊಸನಗರ 48, ಶಿಕಾರಿಪುರದಲ್ಲಿ 25 ಹಾಗೂ ಸೊರಬ ತಾಲೂಕಿನಲ್ಲಿ 11 ಗ್ರಾಮಗಳಿವೆ. ಮುಂದಿನ ಒಂದೂವರೆ ತಿಂಗಳ ಅವಧಿಯಲ್ಲಿ ಈ ಗ್ರಾಮಗಳಲ್ಲಿ ಸಮಸ್ಯೆ ಉದ್ಭ್ಬವವಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಅನುದಾನ: ಕು
ಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಟಾಸ್ಕ್‌ಫೋರ್ಸ್ ಸಮಿತಿಗೆ ತಲಾ 50 ಲಕ್ಷ ರೂ. ಬಿಡುಗಡೆಯಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ಅನುದಾನ ಬಳಕೆ ಮಾಡಲಾಗುತ್ತಿದೆ ಎಂದರು. ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಹೊಸದಾಗಿ ಸುಮಾರು 11 ಬೋರ್‌ವೆಲ್‌ಗಳನ್ನು ಕೊರೆಯಿಸಲಾಗಿದೆ. ಶಾಸಕಿ ಶಾರದಾ ಪೂರ್ಯಾನಾಯ್ಕಾರವರ ನಿರ್ದೇಶನದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆಸ್ಪದವಾಗದಂತೆ ಎಚ್ಚರವಹಿಸಲಾಗಿದೆ ಎಂದು ಇದೇ ಸಂದಭರ್ದಲ್ಲಿ ಹೇಳಿದರು