×
Ad

ಇಬ್ಬರ ಅಸಹಜ ಸಾವು

Update: 2016-04-01 21:52 IST

ಚಿಕ್ಕಮಗಳೂರು, ಎ.1: ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕ ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶೃಂಗೇರಿ ವ್ಯಾಪ್ತಿಯಲ್ಲಿ ಓರ್ವ ಅಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿರುವ ಕುರಿತು ಪ್ರತ್ಯೇಕ ಪ್ರಕರಣಗಳು ದಾಖಲಿಸಲಾಗಿದೆ.

ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿಬಟ್ಟಲು ಗ್ರಾಮದ ನವೀನಾ (27) ಎಂಬಾತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ವಿಪರೀತ ಮದ್ಯಪಾನ ಮಾಡುತ್ತಿದ್ದು, ಜೀವನ ದಲ್ಲಿ ಜಿಗುಪ್ಸೆಗೊಂಡು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ತೀವ್ರ ಗಾಯಗೊಂಡಿದ್ದ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿ ರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಶೃಂಗೇರಿ ಠಾಣಾ ವ್ಯಾಪ್ತಿಯ ಪಟ್ಟಣದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೂಲೆಬೈಲು ಎಂಬಲ್ಲಿನ ಶಾರೂಕ್‌ಖಾನ್(20) ಅಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News