×
Ad

ಪೆರ್ನೆ ಬಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

Update: 2016-04-02 10:13 IST

ಪುತ್ತೂರು, ಎ.2: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಶನಿವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಈ ಭಾಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಪಲ್ಟಿಯಾದ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಬೆಂಕಿ ಹರಡಿಕೊಂಡಿದೆ. ಈ ಹಿನ್ನಲೆಯಲ್ಲಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗವಾಗಿ ಶಾಂತಿನಗರ, ಕರ್ವೇಲು, ದೋರ್ಮೆ, ಮಠಂತಬೆಟ್ಟು, ವಿನಾಯಕ ನಗರ, ಪೆರ್ನೆ, ಸೇಡಿಯಾಪು ರಸ್ತೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News