ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲು ಹೈಕೋರ್ಟ್ ಆದೇಶ
ಬೆಂಗಳೂರು, ಎ.2: ಅಪರೂಪದ ರೋಗಕ್ಕೆ ಅತ್ಯಂತ ದುಬಾರಿ ಎಂಬ ಕಾರಣಕ್ಕೆ ಚಿಕಿತ್ಸೆ ನಿರಾಕರಿಸಿದ್ದ ಎಂಪ್ಲಾಯಿಸ್ ಸ್ಟೇಟ್ ಇನ್ಯೂರೆನ್ಸ್ ಕಾರ್ಪೋರೇಷನ್‌ಗೆ ಮೂರು ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಲಾಗಿದೆ ಎಂದು ವಕೀಲ ಅಶೋಕ್ ಅಗರ್‌ವಾಲ್ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದು ಇಎಸ್‌ಐಸಿ ಕರ್ತವ್ಯವಾಗಿದೆ. ಈ ಸಂದರ್ಭದಲ್ಲಿ ಆಸ್ಪತ್ರೆ ಚಿಕಿತ್ಸೆಯನ್ನು ನಿರಾಕರಿಸಿದ್ದು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದರು.
ಆರೋಗ್ಯ ರಕ್ಷಣೆ ಮಾಡುವುದು ರಾಜ್ಯ ಸರಕಾರಗಳ ಜವಾಬ್ದಾರಿಯಾಗಿದೆ. ಆದರೆ ಇದುವರೆಗೂ ಯಾವುದೇ ಯಾವುದೆ ಆರೋಗ್ಯ ಸಂಬಂಧಿಸಿದ ಕಾನೂನು ಜಾರಿಗೊಳಿಸಿಲ್ಲ. ಸಂವಿಧಾನ ಪ್ರಕಾರ ಆರೋಗ್ಯದ ಹಕ್ಕನ್ನು ಮೂಲಭೂತ ಹಕ್ಕಾಗಿ ಮಾಡಬೇಕು ಅದೇ ರೀತಿಯಲ್ಲಿ ಕೇಂದ್ರ ಸರಕಾರ ಆರೋಗ್ಯ ಹಕ್ಕು ರಕ್ಷಣೆಗಾಗಿ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.
ಚಿಕಿತ್ಸೆ ಎಂಬುದು ನಮಗೆ ಮುಗಿಯದ ಪ್ರಶ್ನೆಯಾಗಿದೆ. ಆದರೆ ದಿಲ್ಲಿ ಹೈ ಕೋರ್ಟ್ ನೀಡಿರುವ ಆದೇಶದಿಂದಾಗಿ ಚಿಕಿತ್ಸೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರೂ ಇನ್ನೂ ಚಿಕಿತ್ಸೆಗೆ ಸ್ವಂದಿಸುತ್ತಿಲ್ಲ. ಚಿಕಿತ್ಸೆಗೆ ದುಬಾರಿ ವೆಚ್ಚವಾಗುತ್ತದೆ ಎಂಬ ನೆಪ ಹೇಳಿ ಚಿಕಿತ್ಸೆ ನೀಡಲು ಎಂಪ್ಲಾಯಿಸ್ ಸ್ಟೇಟ್ ಇನ್ಯೂರೆನ್ಸ್ ಕಾರ್ಪೋರೇಷನ್ ನಿರಾಕರಿಸುತ್ತಿದೆ. ಹೀಗಾಗಿ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು. ಕೋರ್ಟ್‌ನಲ್ಲಿಯೂ ಸಹ ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಆದೇಶವನ್ನು ನೀಡಲಾಗಿದೆ ಎಂದು ಹೇಳಿದರು.