×
Ad

ಕಾಸರಗೋಡು: ಕಾಂಗ್ರೆಸ್ ಹಿರಿಯ ಮುಖಂಡ ತಚ್ಚಂಗಾಡ್ ಬಾಲಕೃಷ್ಣನ್ ನಿಧನ

Update: 2016-04-03 14:32 IST

ಕಾಸರಗೋಡು, ಎ.3: ಜಿಲ್ಲಾ ಕಾಂಗ್ರೆಸ್ ಮುಖಂಡ ತಚ್ಚಂಗಾಡ್ ಬಾಲಕೃಷ್ಣನ್ ರವಿವಾರ ಮಧ್ಯಾಹ್ನ ಎರ್ನಾಕುಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 69 ವರ್ಷ ವಯಸ್ಸಾಗಿತ್ತು. ಕರುಳು ಸಂಬಂಧಿ ರೋಗದಿಂದ ಬಳಲುತ್ತಿದ್ದ ಅವರನ್ನು ಕಳೆದ ಕೆಲದಿನಗಳ ಹಿಂದೆ ಆಸ್ಪತ್ರೆಗೆ ದಾಖಾಲಿಸಲಾಗಿತ್ತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಪಲ್ಲಿಕೆರೆ ಗ್ರಾಪಂ ಸದಸ್ಯ, ಕಾಸರಗೋಡು ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ಸೇರಿದಂತೆ ಹಲವು ಸ್ಥಾನಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News