ಡಿವೈಡರ್‌ಗೆ ಕಾರು ಢಿಕ್ಕಿ:
Update: 2016-04-03 21:59 IST
ದಾವಣಗೆರೆ, ಎ.3: ಇಲ್ಲಿನ ಬಾತಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಅನಂತಪುರದ ನಿವಾಸಿ ಮಲ್ಲಿಕಾರ್ಜುನ್ ರೆಡ್ಡಿ (48)ಮೃತಪಟ್ಟ ವ್ಯಕ್ತಿ. ಇವರು ಹಾವೇರಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಮಲ್ಲಿಕಾರ್ಜುನ್ ರೆಡ್ಡಿ ಸ್ಥಳದಲ್ಲೇ ಸಾವನ್ನಪಿದ್ದು,ಕಾರಿನಲ್ಲಿದ್ದ ಮೂರು ಮಂದಿಗೆ ಗಾಯಗಳಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.