×
Ad

ಪರಿಶಿಷ್ಟ ಪಂಗಡದವರಿಂದ ಅರ್ಜಿ

Update: 2016-04-03 23:53 IST

ಮಂಗಳೂರು, ಎ.3: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಪ್ರಸಕ್ತ(2016-17) ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿದೆ.

 ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ತೆರೆದ ಬಾವಿ-ಕೊಳವೆ ಬಾವಿ ಯೋಜನೆ, ಮೈಕ್ರೋ ಫೈನಾನ್ಸ್ ಕಿರುಸಾಲ ಯೋಜನೆಗಳಿಗೆ ಅರ್ಜಿ ಕರೆಯಲಾಗಿದ್ದು, ಎ.30 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮ, ಜಿ.ಎಚ್.ಎಸ್.ರಸ್ತೆ, ಜನತಾ ಬಝಾರ್ ಕಟ್ಟಡ, 2ನೆ ಮಹಡಿ, ಮಂಗಳೂರು. ದೂ.ಸಂ.: 0824-2420114 ಅನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News