ಇಂದಿನಿಂದ ಜಾನುವಾರುಗಳಿಗೆ ಲಸಿಕೆ
Update: 2016-04-03 23:56 IST
ಮಂಗಳೂರು/ಉಡುಪಿ, ಎ.3: ಜಿಲ್ಲಾಡಳಿತ, ಜಿಪಂ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ದ.ಕ. ಹಾಲು ಒಕ್ಕೂಟದ ವತಿಯಿಂದ ದ.ಕ. ಜಿಲ್ಲೆಯಲ್ಲಿರುವ 2,55,262 (ದನ, ಎಮ್ಮೆ, ಹಂದಿ)ಜಾನುವಾರುಗಳಿಗೆ ಕಾಲು ಮತ್ತು ಬಾಯಿ ರೋಗದ ವಿರುದ್ಧ 10ನೆ ಸುತ್ತಿನ ಲಸಿಕೆ ಕಾರ್ಯಕ್ರಮವನ್ನು ಎ.4ರಿಂದ 30ರವರೆಗೆ ಹಮ್ಮಿಕೊಳ್ಳಲಾಗಿದೆ
ಜಿಲ್ಲಾದ್ಯಂತ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತದೆ. ಇದಕ್ಕಾಗಿ 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿರುವ 2,32,000 ಜಾನುವಾರು ಗಳಿಗೆ ಉಚಿತವಾಗಿ ಲಸಿಕೆ ಹಾಕಲು ಇಲಾಖೆ ಕ್ರಮ ಕೈಗೊಂಡಿದೆ. ಜಾನುವಾರುಗಳ ಮಾಲಕರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಲಸಿಕೆ ಹಾಕುವ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಪಶು ವೈದ್ಯಕೀಯ ಸಂಸ್ಥೆಗಳು/ಹಾಲು ಉತ್ಪಾದಕರ ಸಹಕಾರಿ ಸಂಘಗಳು/ಗ್ರಾಪಂಗಳಿಂದ ಪಡೆದುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.