ಮುಲ್ಕಿ : ಹೋಬಳಿ ಕಂದಾಯ ನಿರೀಕ್ಷಕರ ಕಚೇರಿಯ ಸ್ಥಳಾಂತರ
Update: 2016-04-05 17:03 IST
ಮುಲ್ಕಿ, ಎ.4: ಬಪ್ಪನಾಡು ಗ್ರಾಮ ಚಾವಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮುಲ್ಕಿ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿಯು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮುಲ್ಕಿ ಕಾರ್ನಾಡು ಗಾಂಧಿ ಮೈದಾನದ ಬಳಿ ಇರುವ ವಿಶೇಷ ತಹಶೀಲ್ದಾರರ ಕಚೇರಿಗೆ ಸ್ಥಳಾಂತರಿಸಲಾಗಿದೆ ಎಂದು ವಿಶೇಷ ತಹಶೀಲ್ದಾರ್ ಇಸ್ಹಾಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.