ಎಸಿಬಿ ರಚನೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ
Update: 2016-04-05 23:50 IST
ಬೆಂಗಳೂರು, ಎ.5: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ನಗರದ ವಕೀಲರೊಬ್ಬರು ಸಲ್ಲಿಸಿರುವ ಪಿಐಎಲ್ ಇನ್ನು 2-3 ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ಹೈಕೋರ್ಟ್‌ನ ಏಕಸದಸ್ಯಪೀಠದ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಎಸಿಬಿ ರಚನೆ ಮಾಡಿ ಸರಕಾರ ಮಾ.14ರಂದು ಆದೇಶ ಹೊರಡಿಸಿದೆ. ಆ ಮೂಲಕ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಕೇಸುಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುವ ಅಧಿಕಾರವನ್ನು ಲೋಕಾಯುಕ್ತ ಸಂಸ್ಥೆಯಿಂದ ಕಸಿದು ಕೊಳ್ಳಲಾಗಿದೆ. ಇದು ಕಾನೂನುಬಾಹಿರ ಕ್ರಮವಾಗಿದ್ದು, ಎಸಿಬಿ ರಚನೆ ಆದೇಶವನ್ನು ಅನೂರ್ಜಿತಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.