ಕುಡಿಯುವ ನೀರು ಪೂರೆಕೆಯಲ್ಲಿ ಲೋಪವಾದರೆ ಕಠಿಣ ಕ್ರಮ: ಸಚಿವ ದೇಶಪಾಂಡೆ
ಕಾರವಾರ, ಎ. 6: ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಕರ್ತವ್ಯ ಲೋಪ ಎಸಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಎಚ್ಚರಿಕೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಕುಡಿಯುವ ನೀರಿನ ಕಾಮಗಾರಿಗಳಿಗೆ ಮಾರ್ಚ್ ಕೊನೆಯವರೆಗೆ ಜಿಲ್ಲೆಗೆ 11.40ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 7.27ಕೋಟಿ ರೂ. ವೆಚ್ಚ ಮಾಡಲಾಗಿದೆ. ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳ್ಳದಿರುವ ಅಥವಾ ಅನಿವಾರ್ಯವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು 4.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ಕುಡಿಯುವ ನೀರಿನ ಕಾಮಗಾರಿಗಳಿಗೆ 1.50ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರತಿ ತಹಶೀಲ್ದಾರ್ ಬಳಿ ಕನಿಷ್ಠ 20 ಲಕ್ಷ ರೂ., ಪ್ರತಿ ನಗರಸ್ಥಳೀಯ ಸಂಸ್ಥೆಗಳಲ್ಲಿ 30ಲಕ್ಷ ರೂ. ಲಭ್ಯವಿದ್ದು, ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಕುಡಿಯುವ ನೀರಿನ ಕಾಮಗಾರಿಗಳಿಗೆ ಪ್ರಥಮ ಆದ್ಯತೆ ಒದಗಿಸಬೇಕು ಎಂದು ಅವರು ಹೇಳಿದರು.
ಮೋಟಾರ್, ಪಂಪ್‌ಗಳನ್ನು ತಕ್ಷಣಕ್ಕೆ ಪೂರೈಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿನಲ್ಲಿ ಮೋಟಾರ್ ಬ್ಯಾಂಕ್‌ಗಳನ್ನು ಸ್ಥಾಪಿಸಲು ಈಗಾಗಲೇ ಸೂಚಿಸಲಾಗಿದ್ದು, ಇದರಂತೆ ಕೆಲವು ತಾಲೂಕುಗಳಲ್ಲಿ ಆರಂಭವಾಗಿದೆ. ಎಲ್ಲಾ ತಾಲೂಕುಗಳಲ್ಲಿ ಆರಂಭಿಸಬೇಕು. ಹೊನ್ನಾವಾರ-ಕುಮಟಾದಲ್ಲಿ ಕ ುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಇಲ್ಲಿರುವ ನೀರು ಶುದ್ಧೀಕರಣ ಘಟಕದ ರಿಪೇರಿಗೆ 1.07ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.
ಹೆಲ್ಪ್‌ಲೈನ್ ಆರಂಭ: ಕುಡಿಯುವ ನೀರಿನ ಕುರಿತು ಸಾರ್ವಜನಿಕರಿಂದ ಅಹವಾ ಲುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಲಾಗಿರುವ ಹೆಲ್ಪ್ ಲೈನ್ ಕೇಂದ್ರವನ್ನು ಸಚಿವರು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ದಿನದ 24ಗಂಟೆ ಕಾಲ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ದೂರವಾಣಿ ಸಂಖ್ಯೆ 1077 ಅಥವಾ 08382-229857 ಕರೆ ಮಾಡಬಹುದಾಗಿದೆ. ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸುವ ‘ಜಲದೂತ’ ವಾಹನಗಳಿಗೆ ಸಚಿವರು ಈ ಸಂದರ್ಭದಲ್ಲಿ ಹಸಿರು ನಿಶಾನೆ ತೋರಿಸಿದರು.
ಅಧಿಕಾರಿಗಳು ಕೇಂದ್ರಸಾ್ಥನದಲಿ್ಲರಬೇಕು:
ಗ್ರಾಮೀಣ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದವರೆಗಿನ ಅಧಿಕಾರಿಗಳು ಜೂನ್ ಒಂದರ ತನಕ ಕೇಂದ್ರಸ್ಥಾನವನ್ನು ಬಿಡಬಾರದು. ಅನಿವಾರ್ಯ ಸಂದರ್ಭದಲ್ಲಿ ಅನುಮತಿ ಪಡೆದು ಬಿಡಬಹುದು. ಕುಡಿಯುವ ನೀರಿನ ಕುರಿತು ಅಹವಾಲು ಬಂದ ತಕ್ಷಣ ಅದಕ್ಕೆ ಸ್ಪಂದಿಸಬೇಕು. ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.