ಸಿಎಂ ಹಠಮಾರಿ ಧೋರಣೆ ಕೈಬಿಡಲಿ: ದೊರೆಸ್ವಾಮಿ
Update: 2016-04-06 23:28 IST
ಬೆಂಗಳೂರು, ಎ. 6: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬೇಕೆ ಬೇಕು ಎನ್ನುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಠಮಾರಿ ಧೋರಣೆಯನ್ನು ಕೈಬಿಟ್ಟು ಲೋಕಾಯುಕ್ತ ಸಂಸ್ಥೆಯನ್ನು ಗಟ್ಟಿಗೊಳಿಸಬೇಕೆಂದು ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆಗ್ರಹಿಸಿದ್ದಾರೆ.
ಎಸಿಬಿ ವಜಾಗೊಳಿಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಇಂದು 8ನೆ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ 6 ಮಂದಿ ಎಎಪಿ ಕಾರ್ಯಕರ್ತರು ಗಾಲಿ ಕುರ್ಚಿಯ ಮೂಲಕ ಸಿಎಂ ನಿವಾಸಕ್ಕೆ ಮೆರವಣಿಗೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಅಧಿಕಾರಕ್ಕೆ ಬಂದ ಕೂಡಲೇ ಜನರನ್ನು ಮರೆಯಬಾರದು. ಪ್ರತಿಭಟನೆ ನಡೆಸುತ್ತಿರುವವರ ಅಹವಾಲು ಕೇಳಲು ಮುಂದಾಗಬೇಕೆಂದು ಸಲಹೆ ಮಾಡಿದರು.
ರ್ಯಾಲಿಯಲ್ಲಿ ರವಿಕೃಷ್ಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.