ಎಸಿಬಿ ಹಿಂಪಡೆಯಲು ಸೋನಿಯಾಗೆ ಪತ್ರ
Update: 2016-04-06 23:55 IST
ಬೆಂಗಳೂರು, ಎ.6: ಭ್ರಷ್ಟಾಚಾರ ನಿಗ್ರಹ ದಳವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾದಳದಿಂದ ಎ.11ರಂದು ನಗರದಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ಪತ್ರ ಬರೆಯುವ ಮೂಲಕ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ.ಕೆ.ಸಿ.ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿಯೇ ಮಾದರಿ ಎನಿಸಿಕೊಂಡಿದ್ದ ಸಂಸ್ಥೆಯನ್ನು ಸಂಪೂರ್ಣವಾಗಿ ದುರ್ಬಲಗೊಳಿಸಿರುವುದನ್ನು ಖಂಡಿಸಲಾಗುತ್ತಿದೆ. ಈ ಕುರಿತು ಸರಕಾರದ ನಿಲುವನ್ನು ಕಾಂಗ್ರೆಸ್ ವರಿಷ್ಠರಿಗೆ ತಲುಪಿಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಎಸಿಬಿ ತೊಲಗಿಸಿ ಲೋಕಾಯುಕ್ತ ಉಳಿಸಿ ಎಂದು ಕೋರಿ ಪತ್ರಗಳ ಮೂಲಕ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.