×
Ad

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆ ತಡೆಗೆ ಹೈ ಕೋರ್ಟ್‌ ನಿರಾಕರಣೆ

Update: 2016-04-07 13:16 IST

ಬೆಂಗಳೂರು, ಎ.7: ಈಗಾಗಲೇ ಎ.12ರಂದು ನಿಗದಿಯಾಗಿರುವ ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರು ಪರೀಕ್ಷೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌‌ನ ವಿಭಾಗೀಯ ಪೀಠ ತಿರಸ್ಕರಿಸಿದೆ.
ಚಂದ್ರಶೇಖರ್‌ ಎಂಬವರು ಸಲ್ಲಿಸಿದ್ದ  ರಿಟ್‌ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್‌‌ನ ವಿಭಾಗೀಯ ಪೀಠ , ಮರು ಪರೀಕ್ಷೆಗೆ ತಡೆ ನೀಡಲು ನಿರಾಕರಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಎ.12ರಂದು ನಿದಿಯಾಗಿರುವಂತೆ ರಸಾಯನಶಾಸ್ತ್ರ ಮರು ಪರೀಕ್ಷೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News