4 ಹೆಚ್ಚುವರಿ ಪರೀಕ್ಷಾ ಕೇಂದ್ರಗಳು
Update: 2016-04-07 23:31 IST
ಬೆಂಗಳೂರು, ಎ.7: ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಸಹಾಯಕ ನಿಯಂತ್ರಕ ಮತ್ತು ಲೆಕ್ಕ ಪರಿಶೋದನಾಕಾರಿ ವೃಂದದ 162 ಹುದ್ದೆಗಳಿಗೆ ಆಯೋಗವು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆಯ್ಕೆ ಪರೀಕ್ಷೆ ಬರೆಯಲು ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ಹಾಗಾಗಿ ಇದೀಗ ಇನ್ನಿತರೆ 4 ಕೇಂದ್ರಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ಆದುದರಿಂದ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ಅರ್ಜಿ ಸಂಖ್ಯೆ ಹಾಗೂ ಜನ್ಮ ದಿನಾಂಕ ನೀಡಿ ಆನ್‌ಲೈನ್‌ನಲ್ಲಿ ಬದಲಿಸಿಕೊಳ್ಳಬಹುದಾಗಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.