×
Ad

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ನೇಮಕ

Update: 2016-04-08 15:43 IST

ಬೆಂಗಳೂರು, ಎ. 8: ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಯ್ಕೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಶಾ, ಯಡಿಯೂರಪ್ಪಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಪ್ರಹ್ಲಾಜ್ ಜೋಷಿಯವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆ ಸ್ಥಾನವನ್ನು ಯಡಿಯೂರಪ್ಪನವರಿಗೆ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವು ಬಿಜೆಪಿ ಮುಖಂಡರು ಆಕಾಂಕ್ಷಿಗಳಾಗಿದ್ದು, ಕೊನೆಗೆ ಯಡಿಯೂರಪ್ಪನವರಿಗೆ ಆ ಸ್ಥಾನ ಒಲಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News