ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ವತಿಯಿಂದ ಬಿ.ಸಿ.ರೋಡಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ
Update: 2016-04-08 18:42 IST
ವಿಟ್ಲ : ರಾಜ್ಯ ಬಿ.ಜೆ.ಪಿ.ಯ ನೂತನ ಅಧ್ಯಕ್ಷರಾಗಿ ಬಿ.ಎಸ್. ಯಡಿಯೂರಪ್ಪ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ವತಿಯಿಂದ ಬಿ.ಸಿ.ರೋಡಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭ ಬಿ.ಜೆ.ಪಿ. ಕ್ಷೇತ್ರಾಧ್ಯಕ್ಷ ಜಿ. ಆನಂದ, ಪ್ರಮುಖರಾದ ರಾಮ್‌ದಾಸ ಬಂಟ್ವಾಳ, ಮಚ್ಚೇಂದ್ರ ಸಾಲಿಯಾನ್, ದಿನೇಶ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.